ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ನಿಂದ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ, ಪಾಲಿಕೆ ಮಾಜಿ ಸದಸ್ಯ ಎಲ್.ಎಂ. ಹನುಮಂತಪ್ಪ ಅವರು ತಮ್ಮ ನಿವಾಸದಲ್ಲಿ ಸಾಧನ ಅನಾಥ ವೃದ್ಧಾಶ್ರಮಕ್ಕೆ ಅಗತ್ಯ ವಸ್ತುಗಳ ಕಿಟ್, ತರಕಾರಿ ವಿತರಿಸಿದರು.

ಈ ಸಂದರ್ಭದಲ್ಲಿ ವೃದ್ಧಾಶ್ರಮದ ಅಧ್ಯಕ್ಷೆ ಪುಷ್ಪಲತಾ, ಎಲ್.ಎಂ ಹನುಮಂತಪ್ಪ ಅವರ ಪತ್ನಿ ರತ್ನಮ್ಮ, ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ನಲ್ಕುಂದ ಹಾಲೇಶ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಲ್ . ಹೆಚ್, ಯುವ ಕಾಂಗ್ರೆಸ್ ಮುಖಂಡ ರಮೇಶ್ ಮಂಡ, ಗಾಂಧಿನಗರದ ಯುವ ಮುಖಂಡರು ಭೈರಜ್ಜರ ದಿನೇಶ್ ಉಪಸ್ಥಿತರಿದ್ದರು.



