ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, 6 ತಿಂಗಳುಗಳಿಂದ 7 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಹೊರಡಿಸಲಿದೆ.
ಇಂತಹ ಪ್ರಕರಣಗಳನ್ನು ಕಾಗ್ನೈಜಿಬಲ್ ಎಂದು ಪರಿಗಣಿಸಿ ಮತ್ತು ಜಾಮೀನು ನೀಡುವುದಿಲ್ಲ. ತಪ್ಪಿತಸ್ಥರಿಗೆ 1 ಲಕ್ಷದಿಂದ 5 ಲಕ್ಷದ ವರೆಗೆ ದಂಡ ವಿಧಿಸಲು ಅವಕಾಶವಿದೆ. ರಾಷ್ಟ್ರಪತಿಗಳ ಅಂಕಿತ ದೊರೆತ ಕೂಡಲೇ ಸುಗ್ರೀವಾಜ್ಞೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಆರೋಗ್ಯ ಕಾರ್ಯಕರ್ತರ ಮೇಲಿನ ಹಿಂಸೆ, ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆರೋಗ್ಯ ಕಾರ್ಯಕರ್ತರ ವಾಹನ ಅಥವಾ ಕ್ಲಿನಿಕ್‌ಗೆ ದಾಳಿ ಮಾಡಿದಲ್ಲಿ, ಆಸ್ತಿಯ ಮಾರುಕಟ್ಟೆ ಮೌಲ್ಯದ ದುಪ್ಪಟ್ಟು ಮೊತ್ತವನ್ನು ತಪ್ಪಿತಸ್ಥರೇ ವಸೂಲಿ ಮಾಡಲು ಅವಕಾಶವಿದೆ ಎಂದರು.



