ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 18 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಹೊಸದಾಗಿ ದಾಖಲಾದ 18 ಪ್ರಕರಣದಲ್ಲಿ ಬೆಂಗಳೂರಿನಲ್ಲಿಯೇ 10 ಜನರಿಗೆ ಕೊರೊನಾ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಬುಧವಾರ ಬೆಂಗಳೂರಿನ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬೆಂಗಳೂರಿನ ಹೊಂಗಸಂದ್ರದ ಬಿಹಾರ ಮೂಲಕ ಕಾರ್ಮಿಕನ ಸಂಪರ್ಕದಲ್ಲಿದ್ದ 9 ಜನರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ತಡರಾತ್ರಿ ಕಾರ್ಯಚರಣೆ ನಡೆಸಿದ ಆರೋಗ್ಯ ಜಿಲ್ಲಾಧಿಕಾರಿಗಳು 118 ಜನರನ್ನು ಕ್ವಾರಂಟೈನ್ ಮಾಡಿದ್ದಾರೆ.
ಇಲ್ಲಿಯವರೆಗೂ ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ 17 ಜನರು ಮೃತಪಟ್ಟಿದ್ದು, 145 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 283 ವ್ಯಕ್ತಿಗಳಲ್ಲಿ, 278 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿನ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವು ಸ್ಥಿರವಾಗಿದೆ. ಉಳಿದ ಐದು ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ ಎಂದು ಸರ್ಕಾರ ತಿಳಿಸಿದೆ.



