ಡಿವಿಜಿ ಸುದ್ದ, ಬೆಂಗಳೂರು: ಪಾದರಾಯನಪುರ ಗಲಭೆಯಲ್ಲಿ ಬಂಧಿಸಿದ ಕೊರೊನಾ ಶಂಕಿತರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ. ಈ ಕೂಡಲೇ ಎಲ್ಲ ಎಲ್ಲರನ್ನು ಬೇರೆಡೆ ಸ್ಥಳಾಂತರ ಮಾಡಿ. ಇಲ್ಲದಿದ್ದರೆ, ಬೀದಿಗೆ ಇಳಿದು ಹೋರಾಟ ಮಾಬೇಕಾಗುತ್ತದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಆದರೆ, ರಾಜ್ಯಸರ್ಕಾರ ಕರೋನ ಸೋಂಕನ್ನು ಜಿಲ್ಲೆಗೆ ಕರೆ ತಂದಿದ್ದು ಸರೀನಾ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಆರೋಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿಸಲಿ. ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.