ಡಿವಿಜಿ ಸುದ್ದಿ, ಬೆಂಗಳೂರು: ಕಂಟೇನ್ ಮೆಂಟ್ ಹೊರತು ಪಡಿಸಿ ಉಳಿದ ಕಡೆಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗ ಸೂಚಿ ಅನ್ವಯ ಆರ್ಥಿಕ ಚಟುವಟಿಕೆ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.
ಕೋವಿಡ್ 19 ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಶನಿವಾರ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೂ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದರು ಈ ತೀರ್ಮಾನಕ್ಕೆ ಬಂದಿದ್ದಾರೆ.
ಸಂವಾದದಲ್ಲಿ ತಗೆದುಕೊಂಡ ಪ್ರಮುಖ ನಿರ್ಧರಗಳು
ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆ ಆರಂಭ
ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ
ಹೊರ ಜಿಲ್ಲೆಗಳಿಂದ ಬಂದದವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಬೇಕು
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಕ್ರಮ
ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನ
ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಸಭೆ ನಡೆಸಲು ತೀರ್ಮಾನ



