ಡಿವಿಜಿ ಸುದ್ದಿ, ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮದ್(84) ಇಂದು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಿಸಾರ್ ಅಹಮದ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಿಸಾರ್ ಅಹಮದ್ರವರು ನವೋದಯ ಹಾಗೂ ನವ್ಯ ಕಾವ್ಯ ಪರಂಪರೆಯ ಆಯ್ದ ಅಂಶಗಳನ್ನು ತಮ್ಮ ಕಾವ್ಯಗಳಲ್ಲಿ ಪ್ರಯೋಗಿಸಿ ತಮ್ಮದೇ ವೈಶಿಷ್ಟ್ಯ ಶೈಲಿಯಲ್ಲಿ ಕಾವ್ಯ ರಚಿಸಿ ಖ್ಯಾತಿ ಗಳಿಸಿದ್ದರು.
ನಿತ್ಯೋತ್ಸವ ಕವಿ ಎಂದು ಖ್ಯಾತಿಗಳಿಸಿದ್ದ ನಿಸಾರ್ ಅಹಮದ್ ಅವರು ರಾಜ್ಯೋತ್ಸವ, ನಾಡೋಜ, ಪದ್ಮಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದು ಬಂದಿದೆ. 1974ರಲ್ಲಿ ಪ್ರಕಟವಾದ ‘ನಿತ್ಯೋತ್ಸವ’ ಕವನ ಸಂಕಲನ ನಿಸಾರ್ ಅವರಿಗೆ ಬಹಳ ಜನಪ್ರಿಯತೆ ತಂದು ಕೊಟ್ಟಿತು. ಕೆಎಸ್ಆರ್ ಅವರ ಅನೇಕ ಕವಿತೆಗಳು ಸುಗಮ ಸಂಗೀತದ ಧ್ವನಿ ಸುರುಳಿಗಳ ಮೂಲಕ ಕನ್ನಡಿಗರನ್ನು ತಲುಪಿವೆ.
ಜನಪ್ರಿಯತೆ ಗಳಿಸಿರುವ ‘ಸುಮಧುರ’ ಮತ್ತು ‘ನವೋಲ್ಲಾಸ’ ಕನ್ನಡದ ಮೊದಲ ಜೋಡಿ ಧ್ವನಿ ಸುರುಳಿಗಳು. ಈವರೆಗೆ ಅವರ ಕವನಗಳ ಏಳು ಧ್ವನಿ ಸುರುಳಿಗಳು ಬಿಡುಗಡೆ ಗೊಂಡಿವೆ.