ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ದಾವಣಗೆರೆಯಲ್ಲಿ ಅಗತ್ಯ ಸೇವೆಗಳ ಅಡಿಯಲ್ಲಿ ಕೃಷಿ ಉತ್ಪನ್ನ ಮಾರಾಟಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ನೀಡಿರುವುದರಿಂದ ಭತ್ತ, ಮೆಕ್ಕೆಜೋಳ ಸೇರಿದಂತೆ ಎಲ್ಲಾ ಉತ್ಪನ್ನ ಮಾರಾಟಕ್ಕೆ ಅವಕಾಶವಿದೆ ಎಂದು ದಾವಣಗೆರೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಗತ್ಯ ವಸ್ತುಗಳ ಸೇವೆ ಅಡಿಯಲ್ಲಿ ತರಕಾರಿ ಮಾರುಕಟ್ಟೆ, ಈರುಳ್ಳಿ ಮಾರುಕಟ್ಟೆ ಹಾಗೂ ಭತ್ತ, ಮೆಕ್ಕೆಜೋಳ, ಶೇಂಗಾ ಸೇರಿದಂತೆ ಇತರೆ ಉತ್ಪನ್ನ ಮಾರಾಟ ಮಾಡಲು ಅವಕಾಶವಿದೆ. ಮಾರುಕಟ್ಟೆಗೆ ರಜೆ ಘೋಷಣೆ ಮಾಡಿಲ್ಲ. ಮಾರುಕಟ್ಟೆ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು ರೈತರು, ವರ್ತಕರು, ದಲ್ಲಾಲರು, ಹಮಾಲರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬಹುದು ಎಂದು ಮಾರುಕಟ್ಟೆ ಸಮಿತಿ ತಿಳಿಸಿದೆ.




