ಡಿವಿಜಿ ಸುದ್ದಿ, ಬೆಂಗಳೂರು: ಅನೇಕ ವರ್ಷಗಳಿಂದ ಸರ್ಕಾರಿ ಭೂಮಿ ಸಾಗುವಳಿ ಮಾಡಿಕೊಂಡು ಬಂದಿದ್ದ ರೈತರಿಗೆ, ಸಕ್ರಮ ಮಾಡಿಕೊಳ್ಳಲು ಬಗರ್‌ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸುವುದಕ್ಕೆ ಮತ್ತೊಂದು ಅವಕಾಶ ನೀಡದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಅಕ್ರಮ ಭೂಮಿಯನ್ನು ಸಕ್ರಮ ಮಾಡಿಕೊಳ್ಳಲು ಭೂ ಸುಧಾರಣಾ ಕಾಯ್ದೆಯಡಿ ಈ ಹಿಂದೆ ಅರ್ಜಿ ಸಲ್ಲಿಸಿದ್ದ ಹಲವು ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಆದರೆ, ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ವಿವರಿಸಿದರು.
ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಫಾರಅರ್ಜಿ ಸಲ್ಲಿಸುವ ಅವಧಿ ಮುಗಿದಿದೆ. ಅವಧಿ ವಿಸ್ತರಣೆಗೆ ರೈತರಿಂದ ಮನವಿ ಬಂದಿದೆ. ಅದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಜಮೀನು ಹಾಗೂ ನಿವೇಶನ ನೊಂದಣಿ ಆರಂಭವಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆದಾಯ ಸಂಗ್ರಹ ಹೆಚ್ಚಳಗೊಂಡಿದೆ. ಸೋಮವಾರ 10 ಕೋಟಿ ಸಂಗ್ರಹ ಆಗಿದೆ ಎಂದರು.



