Connect with us

Dvgsuddi Kannada | online news portal | Kannada news online

ಬಾಗಲಕೋಟೆಯಲ್ಲಿ ಗರ್ಭಿಣಿ ಮಹಿಳೆ ಸೀಮಂತ ಕಾರ್ಯಕ್ಕೆ ಬಂದ 13 ಜನರಿಗೆ ಕೊರೊನಾ ಸೋಂಕು

ಪ್ರಮುಖ ಸುದ್ದಿ

ಬಾಗಲಕೋಟೆಯಲ್ಲಿ ಗರ್ಭಿಣಿ ಮಹಿಳೆ ಸೀಮಂತ ಕಾರ್ಯಕ್ಕೆ ಬಂದ 13 ಜನರಿಗೆ ಕೊರೊನಾ ಸೋಂಕು

ಡಿವಿಜಿ ಸುದ್ದಿ, ಬಾಗಲಕೋಟೆ: ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಬಾಗಲಕೋಟೆ ಜನರು ಬೆಚ್ಚಿಬೀಳುವಂತಾಗಿದೆ.

ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿ (ರೋಗಿ 607)ರಿಂದ 13 ಮಂದಿಗೆ ಸೋಂಕು ತಗುಲಿದೆ. ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದೀಗ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ಗರ್ಭಿಣಿಗೆ ಸೋಂಕು ತಗುಲಿರುವ ವಿಷಯ ತಿಳಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.   ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮದ ಬಹುತೇಕರು ಭಾಗಿಯಾಗಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top