ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಎಲ್ಜಿ ಪಾಲಿಮರ್ಸ್ನಲ್ಲಿ ಅನಿಲ ಸೋರಿಕೆಯಾಗಿದ್ದು, ಒಂದು ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. 800ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ.
ಅನಿಲ ಸೋರಿಕೆಯಿಂದಾಗಿ ಸುತ್ತಲ ಪ್ರದೇಶದ ಜನರಲ್ಲಿ ಉಸಿರಾಟ ತೊಂದರೆ, ಕಣ್ಣು ಉರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಪೊಲೀಸರು, ಅಗ್ನಿಶಾಮಕ ದಳ, ಆಂಬುಲೆನ್ಸ್ಗಳನ್ನು ಕಾರ್ಯಚರಣೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿಗಳೂ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರಿಗೆ ಕಂಬನಿ ಮಿಡಿದಿದ್ದಾರೆ. ಘಟನೆಯಲ್ಲಿ ಅಸ್ವಸ್ಥಗೊಂಡಿರುವವರು ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
Saddened by the news of gas leak in a plant near Visakhapatnam which has claimed several lives. My condolences to the families of the victims. I pray for the recovery of the injured and the safety of all: President Ram Nath Kovind. #VizagGasLeak pic.twitter.com/Q2JwKSF0HB
— ANI (@ANI) May 7, 2020
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಅವರೂ ಘಟನೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರೊಂದಿಗೆ ಪ್ರಧಾನಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
PM Narendra Modi has spoken to Andhra Pradesh CM YS Jagan Mohan Reddy regarding the situation in Visakhapatnam. He assured all help and support: Prime Minister's Office. #VizagGasLeak pic.twitter.com/aOelkNxi9N
— ANI (@ANI) May 7, 2020
ಜಿಲ್ಲಾಡಳಿತ ನೆರವಿಗೆ ಧಾವಿಸಿದೆ. 1000–1500 ಮಂದಿಯನ್ನು ಸ್ಥಳಾಂತರ ಮಾಡಲಿದೆ. 800 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.



