ಡಿವಿಜಿ ಸುದ್ದಿ, ದಾವಣಗೆರೆ: ಮಧ್ಯ ಕರ್ನಾಟಕ ದಾವಣಗೆರೆ ಕೊರೊನಾ ರಣ ಕೇಕೆಗೆ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ದಾವಣಗೆರೆಯಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 3 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಮತ್ತೊರ್ವ 55 ವರ್ಷದ ಮಹಿಳೆ ಮಹಿಳೆ ಸಾವನ್ನಪ್ಪಿದ್ದಾರೆ.
ದಾವಣಗೆರೆ ಜಿಲ್ಲೆ ಕಳೆದ ಒಂದು ವಾರದಿಂದ ಕೊರೊನಾ ಮಹಾಮಾರಿಗೆ ತ್ತತ್ತರಿಸಿ ಹೋಗಿದೆ. ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ದಿನದದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ಕೂಡ 3 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 47 ಕ್ಕೆ ಏರಿಕೆಯಾಗಿದೆ. ಇದಲ್ಲದೆ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
55 ವರ್ಷದ ಮೃತ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದಲ್ಲದೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಇದರಿಂದ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ.



