ಡಿವಿಜಿ ಸುದ್ದಿ, ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದೆ. ಇಂದು 12 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ.
ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ-694) ಕೊರೊನಾಗೆ ಇಂದು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಈವರೆಗೂ ಕೊರೊನಾದಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಬಾಗಕೋಟೆಯಲ್ಲಿ ರೋಗಿ-607ರಿಂದ ಮೂವರಿಗೆ ಕೊರೊನಾ ತಗುಲಿದೆ.



