ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವಾರಿಯರ್ಸ್ ಗಳಾದ ಪೌರ ಕಾರ್ಮಿಕರಿಗೆ ಕೈ,ಕಾಲು ತೊಳೆದುಕೊಳ್ಳಲು ವ್ಯವಸ್ಥೆ ಕಲ್ಪಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತರಿಗೆ ಗಾಂಧಿನಗರದ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.
ಕೋರೂನ ವಾರಿಯರ್ಸ್ ಗಳಾದ ಪೌರ ಕಾರ್ಮಿಕರು ಇಡೀ ಊರಿನ ಸ್ವಚ್ಛತೆಯನ್ನು ಕಾಪಾಡಿ ಪುನಃ ಅವರ ಮನೆಗಳಿಗೆ ಹಿಂದಿರುಗುವಂತಹ ಸಂದರ್ಭದಲ್ಲಿ ಸೋಂಕು ತಗುಲದಂತೆ ಸ್ವಚ್ಛತೆ ಕಾಪಾಡಲು ಸೂಕ್ತ ನೀರಿನ ವ್ಯವಸ್ಥೆ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿದ ದಾವಣಗೆರೆ ಪಾಲಿಕೆಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ದಾವಣಗೆರೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಹಾಗೂ ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಹನುಮಂತಪ್ಪ.ಎಲ್.ಎಮ್ ಒತ್ತಾಯಿಸಿದ್ದರು. ಮಹಾಪೌರರು ಹಾಗೂ ಆಯುಕ್ತರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದ್ದರು.



