ಡಿಜಿವಿ ಸುದ್ದಿ, ದಾವಣಗೆರೆ: ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಇಂದಿನಿಂದ ಕೊರೊನಾ ಟೆಸ್ಟಿಂಗ್ ಲ್ಯಾಬ್ ಆರಂಭವಾಗಿದೆ.
ದಾವಣಗೆರೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಎಸ್ ಎಸ್ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಗೆ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಜಿಲ್ಲಾ ಉಸ್ತುವಾರಿ ಭೈರತಿ ಬಸವರಾಜ್, ಸಂಸದ ಜಿ.ಎಂ ಸಿದ್ದೇಶ್ವರ್, ಶಾಮನೂರು ಶಿವಶಂಕರಪ್ಪರ ಅವರು ಉದ್ಘಾಟಿಸಿದರು.
ಶಿವಮೊಗ್ಗ, ಪುಣೆ ಲ್ಯಾಬ್ ನಲ್ಲಿ ಸೊಂಕಿತರ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗುತ್ತಿತ್ತು.ರಿಪೋರ್ಟ್ ತಡವಾಗುತ್ತಿತ್ತು. ಈ ಹಿನ್ನೆಲೆ ಜಿಲ್ಲೆಯಲ್ಲಿ ಟೆಸ್ಟಿಂಗ್ ಲ್ಯಾಬ್ ತೆರೆಯುಂತೆ ದಾವಣಗೆರೆಗೆ ಜಿಲ್ಲಾಡಳಿತ ಒತ್ತಾಯಿಸಿತ್ತು.ಇಂದಿನಿಂದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಲ್ಯಾಬ್ ಕಾರ್ಯಾರಂಭಗೊಂಡಿದೆ.



