ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 53 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ರಾಜಸ್ಥಾನದ ಅಜ್ಮೀರ್ ಪ್ರವಾಸದಿಂದ ಹಿಂದಿರುಗಿದ 22 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬೆಳಗ್ಗೆಯ ಹೆಲ್ತ್ ಬುಲೆಟಿನ್ ನಲ್ಲಿ, ಬೆಂಗಳೂರು 3, ಉತ್ತರ ಕನ್ನಡ 7, ಕಲಬುರಗಿ 3, ದಾವಣಗೆರೆ 1, ಬೆಳಗಾವಿ 22, ಬಾಗಲಕೋಟೆ 8, ಶಿವಮೊಗ್ಗ 8, ಚಿಕ್ಕಬಳ್ಳಾಪುರ, ದಾವಣಗೆರೆ ಯಲ್ಲಿ ತಲಾ 1 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ. ಬೆಂಗಳೂರಿನ 57 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 31 ಮಂದಿ ಕೊರೊನಾ ದಿಂದ ಸಾವನ್ನಪ್ಪಿದ್ದಾರೆ. ಒಟ್ಟು 847 ಪ್ರಕರಣದಲ್ಲಿ ,405 ಮಂದಿ ಗುಣಮುಖರಾಗುದ್ದಾರೆ. 411 ಮಂದಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



