ಡಿವಿಜಿ ಸುದ್ದಿ, ದಾವಣಗೆರೆ: ಅಖಿಲ ಭಾರತೀಯ ವೈದ್ಯಕೀಯ ಸಂಸ್ಥೆ ನಿನ್ನೆ ಬಿಡುಗಡೆಗೊಳಿಸಿದ ವರದಿ ಪ್ರಕಾರ ಕೋವಿಡ್-19 ಜೂನ್ ಮತ್ತು ಜುಲೈ ನಲ್ಲಿ ಇನ್ನು ಹೆಚ್ಚಾಗುವ ಅಪಾಯವಿದೆ ಹೇಳಿದೆ. ಈ ಹಿನ್ನಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ಜೂನ್ ತಿಂಗಳು ನಡೆಸುವುದು ಸೂಕ್ತವಲ್ಲ. ಆದ್ದರಿಂದ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಎನ್.ಎಸ್.ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಪಾಟೀಲ್ ಆಗ್ರಹಿಸಿದ್ದಾರೆ .
ಕೊರೊನಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಮೇ ಮತ್ತು ಜೂನ್ ತಿಂಗಳು ಮೊದಲ ವಾರ ಬಹಳ ನಿರ್ಣಾಯಕವೆಂದು ಹಲವು ಸಾಂಕ್ರಾಮಿಕ ರೋಗ ತಜ್ಞರು ಹೇಳಿದ್ದಾರೆ. ಕೊರೊನಾಗೆ ಸಂಬಂಧಿಸಿದಂತೆ ವಿದೇಶಗಳಲ್ಲಿ ಮತ್ತು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಸೇರಿದಂತೆ ಸಾವಿರಾರು ಮಂದಿ ಕನ್ನಡಿಗರು ಮೇ ತಿಂಗಳ ಅಂತ್ಯದೊಳಗೆ ಬರಲಿದ್ದಾರೆ. ಇದರಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.



