Connect with us

Dvgsuddi Kannada | online news portal | Kannada news online

ದಾವಣಗೆರೆ: ಕರ್ತವ್ಯ ಲೋಪವೆಸಗಿದ ಇಬ್ಬರು ಅಧಿಕಾರಿಗಳ‌ ಅಮಾನತು ಮಾಡಿದ ಜಿಲ್ಲಾಧಿಕಾರಿ

ಪ್ರಮುಖ ಸುದ್ದಿ

ದಾವಣಗೆರೆ: ಕರ್ತವ್ಯ ಲೋಪವೆಸಗಿದ ಇಬ್ಬರು ಅಧಿಕಾರಿಗಳ‌ ಅಮಾನತು ಮಾಡಿದ ಜಿಲ್ಲಾಧಿಕಾರಿ

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಚೆಕ್‍ಪೋಸ್ಟ್ ಗಳಲ್ಲಿ‌ ನಿಯೋಜಿಸಿದ್ದ ಸಹ ಶಿಕ್ಷಕ ಮತ್ತು ದ್ವಿತೀಯ ದರ್ಜೆಯ ಸಹಾಯಕ‌ ಕರ್ತವ್ಯ ಲೋಪವೆಸಗಿದ ಹಿನ್ನೆಲೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ನಗರ ಪ್ರದೇಶಕ್ಕೆ ವಿದೇಶಗಳಿಂದ, ಹೊರರಾಜ್ಯಗಳಿಂದ ಹಾಗೂ ಬೇರೆ ಜಿಲ್ಲೆಗಳಿಂದ ಬರುವ ವಾಹನಗಳನ್ನು ಮತ್ತು ಪ್ರಯಾಣಿಕರನ್ನು ತಪಾಸಣೆ ಮಾಡಲು ನಗರದಲ್ಲಿ ಚೆಕ್‍ಪೋಸ್ಟ್ ಗಳನ್ನು ಸ್ಥಾಪಿಸಿ ಆದೇಶಿಸಲಾಗಿತ್ತು. ಈ ಚೆಕ್‍ಪೊಸ್ಟ್ ನೋಡಲ್ ಅಧಿಕಾರಿಯಾಗಿ ಡಿಡಿಪಿಐ ಇವರನ್ನು ನೇಮಿಸಿದ್ದು ಇವರು ಮೇ 5 ಮತ್ತು 6 ರಂದು ಚೆಕ್‍ಪೋಸ್ಟ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೋತಿವೀರಪ್ಪ ಪದವಿಪೂರ್ವ ಕಾಲೇಜಿನ ಸಹ ಶಿಕ್ಷಕ ನಾಗರಾಜ್ ಎಂ ಮತ್ತು ವಿಶ್ವಬಂಧು ಪ್ರೌಢಶಾಲೆಯ ದ್ವಿ.ದ.ಸ ವೆಂಕಟೇಶ್ ನಾಯ್ಕ ಇವರು ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದ ಹಿನ್ನೆಲೆಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005, ಐಪಿಸಿ ಕಲಂ 188, ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ಕರ್ನಾಟಕ ನಾಗರೀಕರ ಸೇವಾ ನಡತೆ ನಿಯಮಗಳು 1966 ರನ್ವಯ ಕೋವಿಡ್ ಕರ್ತವ್ಯಲೋಪವೆಸಗಿದ ಇವರನ್ನು ಜಿಲ್ಲಾಧಿಕಾರಿಗಳು ಅಮಾನತ್ತಿನಲ್ಲಿ ಇಡಲು ಆದೇಶಿಸಿದ್ದಾರೆ.

ಅಮಾನತು ಅವಧಿಯಲ್ಲಿ ಈ ಸಿಬ್ಬಂದಿಗಳು ನಿಯಮಾನುಸಾರ ಜೀವನಾಂಶಕ್ಕೆ ಮಾತ್ರ ಅರ್ಹರಿರುತ್ತಾರೆ. ಮತ್ತು ಈ ಸಿಬ್ಬಂದಿಗಳು ಈ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲವೆಂದು ಅವರು ಆದೇಶಿಸಿರುತ್ತಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top