ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 26 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಇಂದು ಒಂದೇ ದಿನದಲ್ಲಿ 26 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಇದಲ್ಲದೆ ಕಲಬುರಗಿಯಲ್ಲಿ ಕೊರೊನಾ ಮೊತ್ತೊಬ್ಬರು ಮೃತಪಟ್ಟಿದ್ದಾರೆ.
ಬೀದರ್ 11, ಹಾಸನ 4, ದಾವಣಗೆರೆ, ವಿಜಯಪುರ, ಕಲಬುರಗಿ, ಉತ್ತರ ಕನ್ನಡದ ತಲಾ ಇಬ್ಬರಿಗೆ, ದಕ್ಷಿಣ ಕನ್ನಡ, ಬಳ್ಳಾರಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಈ ಪೈಕಿ 7 ಜನರು ಹೊರ ರಾಜ್ಯದಿಂದ ಬಂದಿರುವವರಾಗಿದ್ದಾರೆ. ಕಲಬುರಗಿಯ ಕಂಟೈನ್‍ಮೆಂಟ್ ಝೋನ್ ಸಂಪರ್ಕದಲ್ಲಿದ್ದ 60 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಮೂಲಕ ಕಲಬುರಗಿಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿದೆ.ರಾಜ್ಯದಲ್ಲಿ ಕೊರೊನಾಗೆ 32 ಜನರು ಸಾವನ್ನಪ್ಪಿದ್ದಾರೆ. ಈವರೆಗೂ 442 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.



