Connect with us

Dvgsuddi Kannada | online news portal | Kannada news online

ಎಪಿಎಂಸಿ ಕಾಯ್ದೆ ತಿದ್ದುಪಡಿ; ಮರು ಪರಿಶೀಲಿಸುವಂತೆ ಸಿದ್ದರಾಮಯ್ಯ ಆಗ್ರಹ

ಪ್ರಮುಖ ಸುದ್ದಿ

ಎಪಿಎಂಸಿ ಕಾಯ್ದೆ ತಿದ್ದುಪಡಿ; ಮರು ಪರಿಶೀಲಿಸುವಂತೆ ಸಿದ್ದರಾಮಯ್ಯ ಆಗ್ರಹ

ಡಿವಿಜಿ ಸುದ್ದಿ, ಬೆಂಗಳೂರುಎಪಿಎಂಸಿ ತಿದ್ದುಪಡಿ ಕಾಯ್ದೆ  ಪ್ರಸ್ತಾವನೆ ಮರು ಪರಿಶೀಲಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ , ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ತೊಂದರೆ ಆಗಲಿದೆ. ಕಾಯ್ದೆಯಿಂದ ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಮಾರುಕಟ್ಟೆ ಪ್ರವೇಶ ಮಾಡಿದರೆ ಸರ್ಕಾರದ ಹಿಡಿತ ಇಲ್ಲದಂತೆ ಆಗುತ್ತದೆ ಎಂದು ವಿವರಿಸಿದ್ದಾರೆ.

ಕೃಷಿ ಉತ್ಪನ್ನಗಳಿಗೆ ದರ ನಿಗಧಿ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅವಕಾಶ ಇಲ್ಲದಂತೆ ಆಗುತ್ತದೆ. ಹೀಗಾಗಿ ತಿದ್ದುಪಡಿಯಿಂದ ರೈತರಿಗೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಆದ್ದರಿಂದ ಸರ್ಕಾರ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top