Connect with us

Dvgsuddi Kannada | online news portal | Kannada news online

ಸಾಮೂಹಿಕ ಪ್ರಾರ್ಥನೆಗೆ ಕಾಂಗ್ರೆಸ್ ಮುಖಂಡರ ಲೆಟರ್ ಫೈಟ್

ಪ್ರಮುಖ ಸುದ್ದಿ

ಸಾಮೂಹಿಕ ಪ್ರಾರ್ಥನೆಗೆ ಕಾಂಗ್ರೆಸ್ ಮುಖಂಡರ ಲೆಟರ್ ಫೈಟ್

ಡಿವಿಜಿ ಸುದ್ದಿ, ಬೆಂಗಳೂರು: ಇಡೀ ತ್ತಿನಲ್ಲಿ ಕೊರೊನಾ ಮಹಾಮಾರಿ ತಾಂಡವ ಆಡುತ್ತಿದೆ. ಈ ಮಹಾಮಾರಿಯನ್ನು ನಿಯಂತ್ರಿಸಲು ಸರ್ಕಾರ, ಕೊರೊನಾ ವಾರಿಯರ್ಸ್ ಹಗಲಿರುಳು ಕಷ್ಟಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಧರ್ಮ ಸಭೆ, ಸಮಾರಂಭ ನಡೆಸಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ, ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಸಾಮೂಹಿಕ ಪಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ರಂಜಾನ್ ಹಿನ್ನೆಲೆಯಲ್ಲಿ ಮೇ 24 ಮತ್ತು 25ರಂದು ವಿಶೇಷ ಪ್ರಾರ್ಥನೆ ಮಾಡಬೇಕಾಗುತ್ತದೆ.  ಇಡೀ ಮುಸ್ಲಿಂ ಸಮುದಾಯದ ಪರವಾಗಿ ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ರಂಜಾನ್ ದಿನ ಈದ್ಗಾ ಮೈದಾನದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಬೆಳಗ್ಗಿನಿಂದ ಮಧ್ಯಾಹ್ನ 1 ಗಂಟೆ ವರೆಗೆ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಸಿಎಂ ಇಬ್ರಾಹಿಂ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್‍ನ ಮುಸ್ಲಿಂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರ ಬರೆದಿದ್ದನ್ನ ವಾಪಸ್ ಪಡೆಯಲು ಸೂಚಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿರುವವರೇ ನಿಯಮವನ್ನ ಮೀರಿ ಪ್ರಾರ್ಥನೆಗೆ ಅವಕಾಶ ಮಾಡಿಕೊಡಿ ಎಂದು ಪತ್ರ ಬರೆದಿದ್ದು ಸರಿಯಲ್ಲ. ಮೊದಲೇ ತಬ್ಲಿಘಿ ಸಮಸ್ಯೆಯಿಂದ ಸಮುದಾಯದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿದೆ. ಈಗ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೊಡಿ ಅಂತ ಪತ್ರ ಬರೆದು ಇನ್ನೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದು ಸರಿಯಲ್ಲ ಎಂದಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top