ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತ ಸಮುದಾಯಕ್ಕೆ 5 ಸಾವಿರ ರೂಪಾಯಿ ಕೊಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ 10 ಲಕ್ಷ ರೈತರಿಗೆ 5 ಸಾವಿರ ನೀಡಲಿದೆ. ಇದಕ್ಕಾಗಿ 500 ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಇಲ್ಲ ಎಂದು ಅನೇಕ ರೈತರು ಮನವಿ ಸಲ್ಲಿಸಿದ್ದರು. ಇದನ್ನು ಗಮನದಲ್ಲಿ ಇಟ್ಟುಕೊಂಡು 5 ಸಾವಿರ ರೂಪಾಯಿ ನೀಡಲು ಸರ್ಕಾರ ನಿರ್ಧರಿದಸಿದೆ ಎಂದು ತಿಳಿದರು.
ಇಲ್ಲಿ ಸಣ್ಣ, ದೊಡ್ಡ ರೈತರು ಎಂದು ವಿಭಜನೆ ಮಾಡದೆ, ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತನಿಗೆ 5 ಸಾವಿರ ಕೊಡಲು ನಿರ್ಧರ ತಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.



