ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಹಗಲಿರುಳು ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ,ರಾಜ್ಯದಲ್ಲಿ 40,250 ಆಶಾ ಕಾರ್ಯಕರ್ತೆಯರಿದ್ದಾರೆ. ಇವರು ತೀವ್ರ ಸಂಕಷ್ಟದಲ್ಲಿ ಇರುವುದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಅವರಿಗೆ ಸಹಕಾರ ಇಲಾಖೆ ಮೂಲಕ ಪ್ರತಿಯೊಬ್ಬರಿಗೆ 3 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು. ಇದಕ್ಕಾಗಿ 512.5 ಕೋಟಿ ಮೀಸಲಿಡಲಾಗಿದೆ ಎಂದರು.
ಇನ್ನು ಪ್ರಕೃತಿ ವಿಕೋಪಕ್ಕೆ ಒಳಗಾಗದ ದನ-ಕರು, ಕುರಿ, ಮೇಕೆಗಳಿಗೆ 5 ಸಾವಿರ ರೂಪಾಯಿ ನೀಡುವ ಯೋಜನೆಯನ್ನು ಮುಂದುವರಿಸಲಾಗವುದು ಎಂದು ಘೋಷಿಸಿದರು.



