ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್ ಅನ್ನು ಹಂತ ಹಂತವಾಗಿ ಸಡಿಲಗೊಳಿಸಲಾಗುತ್ತಿದ್ದು, ಮೇ 17 ರ ಬಳಿಕ ಮತ್ತೆ ಲಾಕ್ ಡೌನ್ ಸಡಿಲಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸುಳಿವು ನೀಡಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮೇ 17ರ ನಂತರ ಲಾಕ್ ಡೌನ್ ಬಹುತೇಕ ಸಡಿಲ ಆಗುತ್ತೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಇದರೊಂದಿಗೆಗೆ ಮೇ . 17 ಸೋಮವಾರದಿಂದ ರಾಜ್ಯದಲ್ಲಿ ಇನ್ನಷ್ಟು ಲಾಕ್ ಡೌನ್ ಸಡಿಲಗೊಳ್ಳಲಿದ್ದು, ಜನ-ಜೀವನ ಸಹಜ ಸ್ಥತಿಗೆ ಮರಳುವ ಸಾಧ್ಯತೆ ಇದೆ.
ನಾಲ್ಕನೇ ಹಂತದ ಲಾಕ್ ಡೌನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಗಳಿಗೆ ಲಿಖಿತ ರೂಪದ ವರದಿ ಕೇಳಿದೆ. ಇಂದು ಕೇಂದ್ರ ಗೃಹ ಇಲಾಖೆಗೆ ಎಲ್ಲ ರಾಜ್ಯಗಳ ವರದಿಗಳು ಕೈ ಸೇರಲಿದೆ. ಈಗಾಗಲೇ ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಈಶಾನ್ಯ ಭಾರತದ ಹಲವು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದು, ಇನ್ನೂ ಹಲವು ರಾಜ್ಯಗಳು ವರದಿ ಇಂದು ಸಲ್ಲಿಕೆ ಮಾಡಲಿದೆ. ಈ ವರದಿ ಆಧರಿಸಿ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.



