ಡಿವಿಜಿಸುದ್ದಿ ಕಾಂ, ದಾವಣಗೆರೆ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ನಾಳೆ ಬೆಳಿಗ್ಗೆ ೯ ಗಂಟೆಗೆ ನಗರಕ್ಕೆ ಆಗಮಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಇದೇ ಮೊದಲ ಸಲ ದಾವಣಗೆರೆಗೆ ಆಗಮಿಸಲಿರುವ ಸಚಿವರು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ೧೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸಲಿದ್ದಾರೆ.



