ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಮುಂದೂಡಿ, ಚುನಾವಣೆ ಆಗುವವರೆಗೂ ಆಡಳಿತಾಧಿಕಾರಿ ನೇಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಕ್ರಮವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸರ್ಕಾರ ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ಅದರ ಬದಲು, ಪ್ರಸ್ತುತ ಅಧಿಕಾರದಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳನ್ನು ಮತ್ತು ಸದಸ್ಯರನ್ನು ಚುನಾವಣೆ ನಡೆಸುವವರೆಗೆ ಮುಂದುವರೆಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಆಡಳಿತಾಧಿಕಾರಿ ಮತ್ತು ನಾಮನಿರ್ದೇಶಿತ ಆಡಳಿತ ಸಮಿತಿ ರಚಿಸಲು ಸರ್ಕಾರ ಮುಂದಾದರೆ, ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧವಾಗುತ್ತದೆ. ಒಂದು ವೇಳೆ ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987ರಲ್ಲಿ ಮಾಡಿದಂತೆ ಅವಧಿ ವಿಸ್ತರಿಸಬೇಕು. ಆ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕು ಒತ್ತಾಯಿಸಿದ್ದಾರೆ.



