ಡಿವಿಜಿಸುದ್ದಿ ಕಾಂ, ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಡೆಸುವ ಜೂನಿಯರ್ ಇಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಿದೆ.
ಸೆ. 23 ರಿಂದ ಅ. 01 ರವರೆಗೆ ಜಿಲ್ಲಾ ಆಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ-51 , 2 ನೇ ಮಹಡಿ, ಬಿ ಬ್ಲಾಕ್‌ನಲ್ಲಿ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆ. 23 ರಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ: 08192-259446 ಸಂಪರ್ಕಿಸಬಹುದು.



