ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯಕ್ಕೆ ಇಂದು ಕರಾಳ ಮಂಗರಳವಾರ. ಇಂದು ಒಂದೇ ದಿನ ರಾಜ್ಯದಲ್ಲಿ 127 ಮಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1373ಕ್ಕೆ ಏರಿಕೆಯಾಗಿದೆ.
ಹೆಚ್ಚಿನ ಸೋಂಕಿತರು ಮಹಾರಾಷ್ಟ್ರದ ಮುಂಬೈನಿಂದ ಬಂದವರಾಗಿದ್ದಾರೆ. ಮಂಡ್ಯದಲ್ಲಿ ಮಾಹಾಮಾರಿ ರಣಕೇಕೆ ಹಾಕುತ್ತಿದ್ದು, ಇಂದು 62 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ, ಕೊರೊನಾ ಮಾಹಾಮಾರಿಗೆ ಮೂವರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. 127 ರಲ್ಲಿ 90 ಜನ ಮುಂಬೈನಿಂದ ಬಂದವರಾಗಿದ್ದಾರೆ.
ಮಂಡ್ಯ 62, ಕಲಬುರಗಿ 11, ಉತ್ತರ ಕನ್ನಡ 4, ಚಿತ್ರದುರ್ಗ 1, ಗದಗ 1, ವಿಜಯಪುರ 1, ಬೆಂಗಳೂರು 6, ಚಿಕ್ಕಮಗಳೂರು 2, ಶಿವಮೊಗ್ಗ 10, ದಾವಣಗೆರೆ 21, ಉಡುಪಿ 4, ಹಾಸನ 3, ಯಾದಗಿರಿ 1 ಪ್ರಕರಣ ಬೆಳಕಿಗೆ ಬಂದಿದೆ.



