Connect with us

Dvgsuddi Kannada | online news portal | Kannada news online

ಮೇ. 23 ನಂತರ ಕಲ್ಲು, ಮರಳು ಗಣಿಗಾರಿಕೆಗೆ ಷರತ್ತುಬದ್ಧ ಅನುಮತಿ

ಪ್ರಮುಖ ಸುದ್ದಿ

ಮೇ. 23 ನಂತರ ಕಲ್ಲು, ಮರಳು ಗಣಿಗಾರಿಕೆಗೆ ಷರತ್ತುಬದ್ಧ ಅನುಮತಿ

ಡಿವಿಜಿ ಸುದ್ದಿ, ದಾವಣಗೆರೆ:  ಕೊರೊನಾ ವೈರಸ್  ಲಾಕ್‍ಡೌನ್ ಸಡಿಲ ಹಿನ್ನೆಲೆ ಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವ ಗಣಿ, ಕಲ್ಲು ಮರಳು ಗಣಿಗಾರಿಕೆ ಹಾಗೂ ಕ್ರಷರ್ ಘಟಕ ಕಾರ್ಯ ಚಟುವಟಿಕೆ ಆರಂಭಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಕೋವಿಡ್-19 ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಮಾನ್ಯ ಭಾರತ ಸರ್ಕಾರ ಜಾರಿಗೊಳಿಸಿದ ಎಲ್ಲಾ ವಿಧಾನಗಳನ್ನು ಕಾರ್ಮಿಕರು ಅಳವಡಿಸಿಕೊಂಡು ಸುರಕ್ಷತೆ ಕಾಪಾಡಿಕೊಳ್ಳುವುದು. ಕಾರ್ಮಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು.ಶೌಚಾಲಯ, ವಾಟರ್ ಪಂಪ್ ಮುಂತಾದ ಕಡೆ ಕಡ್ಡಾಯವಾಗಿ ಸೋಪ್ ಮತ್ತು ಸ್ಯಾನಿಟೈಸರ್ ಬಳಸುವುದು. ಸ್ಥಳೀಯರನ್ನು ಮಾತ್ರ ಬಳಸಿಕೊಳ್ಳವುದು. ಹೊರ ಪ್ರದೇಶದಿಂದ ಕಾರ್ಮಿಕರನ್ನು ಕರೆತರುವಂತಿಲ್ಲ. ಕಾರ್ಮಿಕರು ಮಾಸ್ಕ್ ಮತ್ತು ಗ್ಲೌಸ್ ಧರಿಸುವುದು. ಗಣಿಗಾರಿಕೆ/ಕ್ರಷರ್ ಪ್ರದೇಶಗಳಲ್ಲಿ 05 ಕ್ಕಿಂತ ಹೆಚ್ಚಿನ ಜನರು ಸೇರುವಂತಿಲ್ಲ. 60 ವರ್ಷ ಮೇಲ್ಪಟ್ಟ, ದೃಷ್ಟಿಹೀನ, ಅಂಗವೈಕಲ್ಯ ಹೊಂದಿರುವ ಹಾಗೂ 14 ವರ್ಷದ ಒಳಪಟ್ಟ ಮಕ್ಕಳನ್ನು ಹಾಗೂ ಅನಾರೋಗ್ಯ ಪೀಡಿತರನ್ನು ನಿರ್ಬಂಧಿಸಬೇಕು.

ಕಾರ್ಮಿಕರಿಗೆ ಕಡ್ಡಾಯವಾಗಿ ಆರೋಗ್ಯ ವಿಮೆಯನ್ನು ಮಾಡಿಸುವುದು. ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವುದು. ಕಾರ್ಮಿಕರಿಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿಯನ್ನು ಮೂಡಿಸುವುದು. ಬೆಳಿಗ್ಗೆ 06 ರಿಂದ ಸಂಜೆ 06 ರವರೆಗೆ ಮಾತ್ರ ಕೆಲಸ ನಿರ್ವಹಿಸುವುದು. ಶೀತ, ಕೆಮ್ಮು, ಜ್ವರ ರೋಗದ ಲಕ್ಷಣಗಳು ಕಂಡು ಬಂದರೆ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 1077 ಗೆ ಹಾಗೂ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿಯನ್ನು ನೀಡುವುದು.  ಈ ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 58 ಹಾಗೂ ಐ.ಪಿ.ಸಿ ಸೆಕ್ಷನ್ 188 ಅಡಿ  ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top