ಡಿವಿಜಿ ಸುದ್ದಿ, ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಎಪಿಎಂಸಿ ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಿಸಿದ ಪೌರ ಕಾರ್ಮಿಕರಿಗೆ ಅಗತ್ಯವಿರುವ ಆಹಾರ ಸಾಮಾಗ್ರಿಗಳ ಆಹಾರ ಕಿಟ್ ಗಳನ್ನು ಎಪಿಎಂಸಿ ಸ್ವಚ್ಛತಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷರಾದ ಎಲ್.ಎಮ್. ಹನುಮಂತಪ್ಪ ಮುಖಾಂತರ ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕರ ಸಂಘದ ಉಪಾಧ್ಯಕ್ಷ ದೇವೇಂದ್ರಪ್ಪ.ಎಲ್.ಎಮ್. ಕಾರ್ಯದರ್ಶಿಗಳು ಕೆ.ಸಿ. ಮಂಜುನಾಥ್, ಸಹ ಕಾರ್ಯದರ್ಶಿ ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು ಸಾಗರ್.ಎಲ್.ಹೆಚ್. ಉಪಸ್ಥಿತರಿದ್ದರು.



