Connect with us

Dvgsuddi Kannada | online news portal | Kannada news online

ಕಂಟೈನ್ ಮೆಂಟ್  ವಲಯಗಳಲ್ಲಿsslc ಪರೀಕ್ಷೆಗೆ ಅವಕಾಶವಿಲ್ಲ:  ಸಚಿವ ಸುರೇಶ್ ಕುಮಾರ್  

ಪ್ರಮುಖ ಸುದ್ದಿ

ಕಂಟೈನ್ ಮೆಂಟ್  ವಲಯಗಳಲ್ಲಿsslc ಪರೀಕ್ಷೆಗೆ ಅವಕಾಶವಿಲ್ಲ:  ಸಚಿವ ಸುರೇಶ್ ಕುಮಾರ್  

ಡಿವಿಜಿ ಸುದ್ದಿ, ಬೆಂಗಳೂರು: ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಪರೀಕ್ಷೆ ನಡೆಯುವ ದಿನ ಕಂಟೈನ್ಮೆಂಟ್ ವಲಯವೆಂದು ಘೋಷಿಸಿದರೆ ಅಲ್ಲಿಯೂ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಬೆಂಗಳೂರು ಆಕಾಶವಾಣಿ ಸಂದರ್ಶನದಲ್ಲಿ ಮಾತನಾಡಿದ ಸಚಿವರು, ಕಂಟೈನ್ ಮೆಂಟ್ ವಲಯದಲ್ಲಿ  ಪರೀಕ್ಷಾ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿ ಎಂದು ಪರಿಗಣಿಸದೇ ಹೊಸ ಪರೀಕ್ಷಾರ್ಥಿ ಎಂದೇ ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದೆಂದು ಸಚಿವರು ಹೇಳಿದರು.

ವಲಸೆ ಕಾರ್ಮಿಕರ ಮಕ್ಕಳು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಹಾಸ್ಟೆಲ್‌ ವಾಸಿ ವಿದ್ಯಾರ್ಥಿಗಳಿಗೆ ಅವರು ವಾಸವಾಗಿರುವ ಸ್ಥಳಗಳ ಹತ್ತಿರದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿರುವ ಎಲ್ಲ ಅಭ್ಯರ್ಥಿಗಳಿಗೆ ಹೊಸದಾಗಿ ಹಾಲ್ ಟಿಕೆಟ್‌ಗಳನ್ನು ಒದಗಿಸಲಾಗುತ್ತಿದೆ. ಜೂನ್ 25ಕ್ಕೆ ಪ್ರಾರಂಭವಾಗಿ ಜು. 4ಕ್ಕೆ ಪರೀಕ್ಷೆಗಳು ಮುಕ್ತಾಯವಾಗಲಿದ್ದು, ಜು.31ರೊಳಗೆ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಲಾಗವುದು ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top