ನವದೆಹಲಿ: ದೇಶಸಲ್ಲಿ ಇಂದು 6,767 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 147 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,31,868ಕ್ಕೆ ಏರಿಕೆಯಾಗಿದೆ. 3,867 ಜನ ಮೃತಪಟ್ಟಿದ್ದಾರೆ. 54,440 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, 73,560 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 47,190, ತಮಿಳುನಾಡಿನಲ್ಲಿ 15,512 , ಗುಜರಾತ್ನಲ್ಲಿ 13,664 ಮತ್ತು ದೆಹಲಿಯಲ್ಲಿ 12,910 ಮಂದಿ ಕೊರೊನಾ ಸೋಂಕಿತರಿದ್ದಾರೆ.



