ಡಿವಿಜಿ ಸುದ್ದಿ,ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇಂದು 130 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಜೆಯ ಪತ್ರಿಕಾ ಪ್ರಕಟಣೆ 24/05/2020.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @KarnatakaVarthe @PIBBengaluru @KarFireDept pic.twitter.com/2ph008qfhf
— Karnataka Health Department (@DHFWKA) May 24, 2020
ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ, 2,089ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್–19 ಸೋಂಕಿನಿಂದಾಗಿ ಇದುವರೆಗೂ 42 ಜನರು ಮೃತಪಟ್ಟಿದ್ದಾರೆ. ಒಟ್ಟು 654 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1,391 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರ 1, ಮಂಡ್ಯ 15, ಕಲಬುರಗಿ 6, ಚಿಕ್ಕಬಳ್ಳಾಪುರ 27, ದಾವಣಗೆರೆ 4, ಯಾದಗಿರಿ 24, ಹಾಸನ 14, ಬೀದರ್ 6, ಉಡುಪಿ 23, ವಿಜಯಪುರ 1, ಉತ್ತರ ಕನ್ನಡ 2, ದಕ್ಷಿಣ ಕನ್ನಡ 1, ಧಾರವಾಡ 1, ಶಿವಮೊಗ್ಗ 2, ತುಮಕೂರು 2 ಮತ್ತು ಕೊಡಗು ಜಿಲ್ಲೆಯಲ್ಲಿ 1 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ.