ಡಿವಿಜಿ ಸುದ್ದಿ, ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ದಾಖಲೆಯ 45.3 ಡಿಗ್ರಿ ತಾಪಮಾನ ದಾಖಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ವಿಜಯಪುರ ಜಿ. ಆಲಮೇಲ ಪಟ್ಟಣದಲ್ಲಿ ದಾಖಲಾಗಿದೆ.
ಗರಿಷ್ಠ 45.3 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವರದಿಯಲ್ಲಿ ತಿಳಿಸಿದೆ.



