ಡಿವಿಜಿ ಸುದ್ದಿ, ದಾವಣಗೆರೆ: ನಗರದ ಜೆ.ಜೆಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಅವರು ಕೋವಿಡ್-19 ಪರೀಕ್ಷಾ ಲ್ಯಾಬ್ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಜೆ.ಜೆ.ಎಂ ಮಹಾವಿದ್ಯಾಲಯದ ಅಧ್ಯಕ್ಷರು ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಶಾಸಕ ಎಸ್.ಎ. ರವೀಂದ್ರನಾಥ್, ಪ್ರೊ.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜೆಜೆಎಂ ಮೆಡಿಕಲ್ ಕಾಲೇಜ್ ಪ್ರಾಂಶುಪಾಲ ಎಸ್.ಎಸ್ ಮುರುಗೇಶ್, ಲೆಕ್ಕ ಪರಿಶೋಧಕ ಅಥಣಿ ವೀರಣ್ಣ ಉಪಸ್ಥಿತರಿದ್ದರು.