ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೊರಗಡೆ ಹೋದಷ್ಟೇ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ . ಇಂದು ಕೂಡ 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 142 ಪಾಸಿಟಿವ್ ಪ್ರಕರಣಗಳು ಪತ್ತೆಯಾದಂತಾಗಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಳಗ್ಗಿನ ವರದಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ, ಇಂದು ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ 6 ಸೋಂಕಿತರು ಪತ್ತೆಯಾಗಿದ್ದಾರೆ.
ಇಂದು ಪತ್ತೆಯಾದ 6 ಸೋಂಕಿತರಲ್ಲಿ 48 ವರ್ಷದ ಪುರುಷ, 21, 18 ವರ್ಷದ ಯುವತಿಯರು ಹಾಗೂ 20 ವರ್ಷದ ಯುವಕ ಇವರೆಲ್ಲರು ಪಿ-1254 ಸಂಪರ್ಕ ಹೊಂದಿದವರಾಗಿದ್ದಾರೆ. 46 ವರ್ಷದ ಪುರುಷ ಪಿ-1373 ಸಂಪರ್ಕ, 73 ವರ್ಷದ ವೃದ್ಧೆ ಪಿ-1658 ಸಂಪರ್ಕ ಹೊಂದಿದ್ದರಿಂದ ಕೊರೊನಾ ಪಾಸಿಟಿವ್ ಬಂದಿದೆ.
@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/0t3HUkitQi
— Karnataka Health Department (@DHFWKA) May 27, 2020
ಜಿಲ್ಲೆಯಲ್ಲಿ ಒಟ್ಟು 142 ಪಾಸಿಟಿವ್ ಪ್ರಕರಣ ಪತ್ತೆಯಾದಂತಾಗಿದ್ದು, ಅದರಲ್ಲಿ 66 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದು,4 ಜನ ಮರಣ ಹೊಂದಿದ್ದಾರೆ. ಇನ್ನು 72 ಪ್ರಕರಣಗಳು ಸಕ್ರಿಯವಾಗಿವೆ.



