ಡಿವಿಜಿ ಸುದ್ದಿ, ದಾವಣಗೆರೆ: ಲಾಕ್‍ಡೌನ್ ಅವಧಿ ವಿಸ್ತರಣೆಗೊಂಡಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರ ರಿಯಾಯಿತಿಯ ಕಾಲಾವಧಿಯನ್ನು 2020 ರ ಜುಲೈ 31 ರವರೆಗೆ ವಿಸ್ತರಿಸಲಾಗಿದೆ.
ಕೊರೊನಾ ಹಿನ್ನೆಲೆ ಏಪ್ರಿಲ್ ತಿಂಗಳ ಅಂತ್ಯದವರೆಗಿದ್ದ ಕಾಲಾವಧಿಯನ್ನು ಮೇ ಅಂತ್ಯದವರೆಗೆ ವಿಸ್ತರಿಸಲಾಗಿತ್ತು. ಲಾಕ್‍ಡೌನ್ ಅವಧಿ ವಿಸ್ತರಣೆಗೊಂಡ ಹಿನ್ನೆಲೆ ಜುಲೈ 31 ರವರೆಗೆ ವಿಸ್ತರಿಸಲಾಗಿದೆ ಹಾಗೂ ದಂಡರಹಿತವಾಗಿ ಆಸ್ತಿ ತೆರಿಗೆ ಪಾವತಿಸಲು 2020 ರ ಅಕ್ಟೋಬರ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ತಿಳಿಸಿದ್ದಾರೆ.



