ನವದೆಹಲಿ: ದೇಶದಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಡೀ ದೇಶದಲ್ಲಿ ಒಂದೇ ದಿನ 7,964 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 265 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಒಟ್ಟು 1,73,763 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 4971 ಜನರು ಸಾವಗೀಡಾಗಿದ್ದಾರೆ. 86422 ಪ್ರಕರಣಗಳು ಕ್ರಿಯಾಶೀಲವಾಗಿದ್ದು, 82370 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮೆನೆ ಸೇರಿದ್ಧಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 33,133 ಪ್ರಕರಣಗಳು ಬೆಳಕಿಗೆ ಬಂದಿದ್ದು, 2098 ಜನರು ಮೃತರಾಗಿದ್ದಾರೆ. ಗುಜರಾತ್ 980, ದೆಹಲಿ 398, ಮಧ್ಯಪ್ರದೇಶದಲ್ಲಿ 334, ಪಶ್ಚಿಮ ಬಂಗಾಳದಲ್ಲಿ 302, ಉತ್ತರ ಪ್ರದೇಶದಲ್ಲಿ 198 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.



