ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿಂದು ಮತ್ತೆ 6 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 156 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಂದ ಇಂದು 17 ಜನ ಗುಣಮುಖರಾಗಿ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 121ಜನ ಗುಣಮುಖರಾಗಿದ್ದು, 4 ಜನ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇನ್ನು 31 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.



