Connect with us

Dvgsuddi Kannada | online news portal | Kannada news online

ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ; ಸಚಿವ  ಎಸ್. ಸುರೇಶ್ ಕುಮಾರ್

ಪ್ರಮುಖ ಸುದ್ದಿ

ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ; ಸಚಿವ  ಎಸ್. ಸುರೇಶ್ ಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು: ಸದ್ಯಕ್ಕೆ ಯಾವುದೇ ಶಾಲೆ ಆರಂಭಿಸುವುದಿಲ್ಲ. ಪೋಷಕರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Posted by Suresh Kumar S on Thursday, June 4, 2020

ಫೇಸ್‍ಬುಕ್‍ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ.

ಈ ತಿಂಗಳು ಜೂನ್ 10, 11, 12 ರಂದು ಎಲ್ಲ ಶಾಲೆಗಳಲ್ಲಿ ಪೋಷಕರ ಸಭೆ ನಡೆಯಲಿದೆ. ಪೋಷಕರ ಅಭಿಪ್ರಾಯಗಳು ಕ್ರೋಢಿಕರಿಸಿ ಜೂನ್ 15ಕ್ಕೆ ಸರ್ಕಾರವನ್ನು ತಲುಪಬಹುದು. ನಂತರ ಶಾಲೆ ಆರಂಭಿಸಬೇಕೋ? ಬೇಡವೋ ಎಂಬುದನ್ನು ನಿರ್ಧಾರ ಕೈಗೊಳ್ಳಲಾಗುವುದು. ಜುಲೈ ಒಂದರಿಂದ ಶಾಲೆಯನ್ನು ತೆರೆಯುವುದಿಲ್ಲ. ಸರ್ಕಾರ ಅಭಿಪ್ರಾಯ ಸಂಗ್ರಹ ನಡೆಯಲಿದೆ ಎಂದು ಸ್ಪಷ್ಟ ಪಡಿಸಿದರು.

ಕೊರೊನಾ ದೀರ್ಘ ಕಾಲ ಇದ್ದರೆ ಅಲ್ಲಿಯವರೆಗೆ ಶಾಲೆಯನ್ನು ಮುಂದೂಡಬೇಕೇ..? ಅಥವಾ ಕೊರೊನಾದ ಜೊತೆಗೆ ನಾವು ಬದುಕಬೇಕೇ ಎಂಬ ಪ್ರಶ್ನೆ ಎದ್ದಿದೆ. ಈಗಾಗಲೇ ಚಿಕನ್ ಗುನ್ಯಾ ರೀತಿಯ ಕಾಯಿಲೆ ಜೊತೆ ಬದುಕುತ್ತಿದ್ದೇವೆ. ಇದೇ ರೀತಿಯಾಗಿ ಕೊರೊನಾ ಜೊತೆ ಬದುಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಯೂ ಇದೆ..?. ಇದರ ಜೊತೆಯಲ್ಲಿ ಶಾಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದು ಹೇಗೆ ಎನ್ನುವುದರ ಬಗ್ಗೆಯೂ   ಚರ್ಚಿಸಬೇಕಿದೆ ಎಂದರು.

ನಾವು ಯಾವ ಲಾಬಿಗೂ ಮಣಿದಿಲ್ಲ. ತರಾತುರಿಯಲ್ಲಿ ನಾವು ಶಾಲೆಯನ್ನು ತೆರೆಯುವುದಿಲ್ಲ. ಮಕ್ಕಳ ಸುರಕ್ಷತೆ ಜೊತೆಗೆ ಮಕ್ಕಳ ಕಲಿಕೆ, ಭವಿಷ್ಯವನ್ನು ಗಮನಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಸದ್ಯಕ್ಕೆ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆ ಪ್ರಾರಂಭ ಬೇಡ ಎಂಬ ಅಭಿಪ್ರಾಯ ಬಂದಿದೆ. ಪೋಷಕರ ಅಭಿಪ್ರಾಯ ಪಡೆದ ಬಳಿಕ ನಾವು ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top