ಡಿವಿಜಿ ಸುದ್ದಿ, ಹೊನ್ನಾಳಿ: ಮುಂಗಾರು ಮಳೆ ಆರಂಭವಾಗಿದ್ದು ರೈತರು ಬಿತ್ತನೆ ಆರಂಭಿಸಿದ್ದಾರೆ. ಹೀಗಾಗಿ ಹೊನ್ನಾಳಿ ತಾಲ್ಲೂಕು ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ ಕೇಂದ್ರಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಚಾಲನೆ ನೀಡಿದರು.
ತಾಲ್ಲೂಕಿನಲ್ಲಿ 1,700 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತನಿದ್ದು ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಆರು ರೈತ ಸಂಪರ್ಕದಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ನಡೆಯಲಿದೆ.
ಕೆಂಚಿಕೊಪ್ಪದಲ್ಲಿ ಹೆಚ್ಚುವರಿಯಾಗಿ ಒಂದು ಕೇಂದ್ರ ತೆರೆಯಲಾಗಿದೆ. ಸಾಮನ್ಯ ರೈತರಿಗೆ 20 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ 30 ರೂಪಾಯಿ ಕೆಜಿ ರಿಯಾಯಿತಿಯಂತೆ ವಿತರಣೆ ಆರಂಭಿಸಲಾಯಿತು.



