ಡಿವಿಜಿ ಸುದ್ದಿ, ದಾವಣಗೆರೆ: ನಗರದ ಸಿಜೆ ಆಸ್ಪತ್ರೆ ಹಿಂಭಾಗದ ರಸ್ತೆ ಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಪಾಲಿಕೆ ಕಾಂಗ್ರೆಸ್ ಸದಸ್ಯರು ಗುತ್ತಿಗೆದಾರರಿಗೆ ತರಾಟೆ ತೆಗೆದುಕೊಂಡರು.
14ನೇ ಹಣಕಾಸು ಯೋಜನೆಯಡಿ 25 ಲಕ್ಷ ಮೊತ್ತದ ಒಳಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಟೆಂಡರ್ ಕಾಲಮಿತಿ ಅವಧಿ ಮುಗಿದಿದ್ದರೂ ಸಹ ಕೆಲಸ ಮುಗಿಸಿಲ್ಲ. ಜನಸಾಮಾನ್ಯರಿಗೆ ತೊಂದರೆ ನೀಡುತ್ತಿರುವುದರ ವಿರುದ್ಧ ಕಾಂಗ್ರೆಸ್ ಪಾಲಿಕೆ ಸದಸ್ಯರುಗಳು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸಿ ತರಾಟೆ ತೆಗೆದುಕೊಂಡರು. ಆದಷ್ಟು ಬೇಗ ಕೆಲಸ ಮುಗಿಸಿ ಕೊಡುವುದಾಗಿ ಗುತ್ತಿಗೆದಾರರು ತಿಳಿಸಿದರು.
ಸಂದರ್ಭದಲ್ಲಿ ಪಾಲಿಕೆ ವಿರೋಧಪಕ್ಷದ ನಾಯಕ ಎ. ನಾಗರಾಜ್, ಸದಸ್ಯರುಗಳಾದ ಗಡಿ ಗುಡಾಳ್ ಮಂಜುನಾಥ್, ದೇವರಮನೆ ಶಿವಕುಮಾರ್, ಕೆ ಚಮನ್ ಸಾಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ .ಕೆ ಶೆಟ್ಟಿ, ಸಾಮಾಜಿಕ ಜಾಲತಾಣದ ಕೆ.ಎಲ್.ಹರೀಶ್ ಬಸಾಪುರ, ಮಾಜಿ ನಗರಸಭಾ ಸದಸ್ಯ ಎಸ್. ಮಲ್ಲಿಕಾರ್ಜುನ್, ಏನ್.ಎಸ್.ಯು. ಐ ನ ಮುಜಾಹಿದ್ ಮುಂತಾದವರು ಉಪಸ್ಥಿತರಿದ್ದರು.