ಡಿವಿಜಿ ಸುದ್ದಿ, ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದೆ. ಆದರೆ, ಕಾಫಿನಾಡು ಚಿಕ್ಕಮಗಳೂರು ಕೊರೊನಾ ಮುಕ್ತ ಜಿಲ್ಲೆಯಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದರೂ ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಗುಡ್‍ನ್ಯೂಸ್ ಸಿಕ್ಕಿದೆ. ಜಿಲ್ಲೆಯು ಸದ್ಯ ಕೊರೊನಾ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಯಾಬವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಕೊರೊನಾ ವೈರಸ್ ನಿಂದ ಆಸ್ಪತ್ರೆ ಸೇರಿದ್ದ ಎಲ್ಲಾ 16 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 16 ಮಂದಿಗೆ ಸೋಂಕು ಪತ್ತೆಯಾಗಿತ್ತು. ಅವರೆಲ್ಲರೂ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಗುಣಮುಖರಾದವರನ್ನು ಡಿಸ್ಚಾರ್ಜ್ ಮುನ್ನವೇ ಜಿಲ್ಲಾಡಳಿತ ಎಲ್ಲರ ವೈದ್ಯಕೀಯ ಪರೀಕ್ಷೆ ಮಾಡಿಸಿದೆ. ರಿಪೋರ್ಟ್ ನಲ್ಲಿ ಕೊರೊನಾ ನೆಗೆಟಿವ್ ಬಂದಿದ್ದರಿಂದ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಸದ್ಯ ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಪ್ರಕರಣ ಇಲ್ಲದಂತಾಗಿದ್ದು, ರಾಜ್ಯದಲ್ಲಿ ಮತ್ತೊಂದು ಕೊರೊನಾ ಮುಕ್ತ ಜಿಲ್ಲೆಯಾಗಿದೆ.

ಚಾಮರಾಜನಗರ ಮೊದಲ ಕೊರೊನಾ ಮುಕ್ತ ಜಿಲ್ಲೆ
ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದ ಸುತ್ತಲೂ ಕೊರೊನಾ ಸೋಂಕಿತ ಪ್ರದೇಶಗಳಿದ್ದರೂ, ಜಿಲ್ಲೆಯಲ್ಲಿ ಒಂದೇ ಒಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ. ಹೀಗಾಗಿ ಚಮರಾಜನಗರವನ್ನು ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರು ಜಿಲ್ಲಾಡಳಿತ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.



