ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರು ಭಾನುವಾರದಂದು ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಎವಿಕೆ ಕಾಲೇಜಿನಲ್ಲಿಉದ್ಯೋಗ ಮೇಳ ನಡೆಯಲಿದೆ.
ಇದಾದನಂತರ ವನಿತಾ ಸಮಾಜದ ವೃದ್ಧಾಶ್ರಮದ ವೃದ್ಧರಿಗೆ ಹಾಗೂ ಸಿಜೆ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಕಾರ್ಯಕ್ರವ ನಡೆಯಲಿದೆ.
ಸಂಜೆ ೬ ಗಂಟೆಗೆ ಎವಿಕೆ ಕಾಲೇಜು ರಸ್ತೆಯಲ್ಲಿ ಫುಡ್ ಫೇಸ್ಟ್, ಮ್ಯೂಸಿಕಲ್ ನೈಟ್, ಸ್ಟ್ರೀಟ್ ಚೆಸ್ ಪಂದ್ಯಾವಾಳಿಯನ್ನು ಆಯೋಜಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭಾಗಿಯಾಗಲಿದ್ದಾರೆ.