Connect with us

Dvgsuddi Kannada | online news portal | Kannada news online

ಜಿಮ್ ಪ್ರಾರಂಭಿಸಲು ಅನುಮತಿ ನೀಡುವಂತೆ ಮನವಿ

Home

ಜಿಮ್ ಪ್ರಾರಂಭಿಸಲು ಅನುಮತಿ ನೀಡುವಂತೆ ಮನವಿ

ಡಿವಿಜಿ ಸುದ್ದಿ, ದಾವಣಗೆರೆ: ನಗರದಲ್ಲಿ 40 ರಿಂದ 50 ಜಿಮ್ ಗಳಿದ್ದು,ಜಿಮ್ ನಂಬಿಕೊಂಡಿದ್ದ  ಟ್ರೈನರ್ ಹಾಗೂ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಿ ಜೂನ್ 08 ರಿಂದ ಜಿಮ್ ಪ್ರಾರಂಭಿಸಲು ಅನುಮತಿ ನೀಡಬೇಕು ಎಂದು ಜಿಮ್ ಮಾಲೀಕ ಸಾಯಿನಾಥ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ತಿಂಗಳಿಂದ ಜಿಮ್ ಮಾಲೀಕರು ಬಾಡಿಗೆ, ವಿದ್ಯುತ್ ಬಿಲ್, ಸಾಲ ಕಟ್ಟಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರದ ಎಲ್ಲಾ ಮಾರ್ಗ ಸೂಚಿಯನ್ನು ಅನುಸರಿಸಲು ಜಿಮ್ ಮಾಲೀಕರು ತಯಾರಿದ್ದು, ಸರ್ಕಾರ ಜಿಮ್ ತೆರೆಯಲು ಅವಕಾಶ ನೀಡಬೇಕು ಎಂದರು.

ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್ ಮಾತನಾಡಿ, ಜಿಮ್ ಪ್ರಾರಂಭಿಸಲು ಅವಕಾಶ ಮಾಡಿಕೊಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿಸಲ್ಲಿಸಲಾಗಿದೆ. ಜೂನ್ 08 ರಂದು ಜಿಮ್ ತೆರೆಯಲು ಅವಕಾಶ ಕಲ್ಪಿಸ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಟ್ರೈನರ್ ಶಿವರಾಜ್, ಫಕೃದ್ದೀನ್, ಶಿವು ಪೂಜಾರಿ, ಶ್ರೀರಕ್ಷ ಉಪಸ್ಥಿತರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top