ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಮಾರ್ಚ್‍ನಲ್ಲಿ ನಡೆಯಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸರ್ಕಾರ ಜೂ 25 ರಿಂದ ಜುಲೈ 4 ರವರೆಗೆ ನಡೆಸಲು ತಿರ್ಮಾನಿಸಿದೆ.
ಈ ಬಗ್ಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಗೊಂದಲ, ಆತಂಕ ಇರುವುದರಿಂದ ಎಲ್ಲಾ ಆತಂಕ ಗೊಂದಲಗಳನ್ನು ನಿವಾರಿಸಿಕೊಳ್ಳಲು ಕಚೇರಿ ಹಂತದಲ್ಲಿ ಸಹಾಯವಾಣಿ ತೆರೆಯಲಾಗಿದೆ.ಈ ಸಹಾಯವಾಣಿಯು ಜೂ.4 ರಿಂದ ಪರೀಕ್ಷೆ ಪ್ರಾರಂಭವಾಗುವವರೆಗೆ ಕಾರ್ಯನಿರ್ವಹಿಸುತ್ತದೆ.
ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಉಪನಿರ್ದೇಶಕರ ಕಚೇರಿ ಸಂಖ್ಯೆ; 08192-23107 ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಖ್ಯೆ; 08192-242572 ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪೋಷಕರು ಹಾಗೂ ವಿದ್ಯಾರ್ಥಿಗಳು ತಮ್ಮೆಲ್ಲಾ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿದ್ದಾರೆ.



