ಡಿವಿಜಿ ಸುದ್ದಿ, ಬೆಂಗಳೂರು: ಜೂನ್ 19 ರಂದು ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‘ಬಿ’ ಫಾರಂ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಲಾಯಿತು.ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಜಿ. ಪರಮೇಶ್ವರ, ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕೆಪಿಸಿಸಿ ಅಧ್ಯಕ್ಷರಾದ @DKShivakumar, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ @siddaramaiah ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.
ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜ್ಯಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ @kharge ಅವರಿಗೆ 'ಬಿ' ಫಾರಂ ನೀಡಿದರು. pic.twitter.com/quDZB1TA9X— D K Shivakumar, President, KPCC (@KPCCPresident) June 8, 2020