ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,760ಕ್ಕೆ ಏರಿಕೆಯಾಗಿದೆ. ಈವರೆಗೆ 64 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ 2,519 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,175 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. 14 ಜನ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಕಲಬುರಗಿಯಲ್ಲಿ 99, ಯಾದಗಿರಿಯಲ್ಲಿ 66, ಬೀದರ್ 48, ಉಡುಪಿ 45, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ 1 ಮತ್ತು ರಾಮನಗರದಲ್ಲಿ 1 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಸಂಜೆಯ ಪತ್ರಿಕಾ ಪ್ರಕಟಣೆ 08/06/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/ty4KVbxCpp@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/OvUUH1kPSr— Karnataka Health Department (@DHFWKA) June 8, 2020