ಡಿವಿಜಿ ಸುದ್ದಿ, ಬೆಂಗಳೂರು: ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ರಾಜ್ಯ ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಿದೆ.
ಪದವೀಧರ ಕ್ಷೇತ್ರದಿಂದ ಎರಡು ಹಾಗೂ ಶಿಕ್ಷಕರ ಕ್ಷೇತ್ರದಿಂದ ಎರಡು ಸ್ಥಾನಕ್ಕೆ ಚುನಾವಣೆ ನಡೆಯಬೇಕಿತ್ತು. ಈ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ನಾಲ್ಕು ಸದಸ್ಯರ ಅವಧಿ ಇದೇ ತಿಂಗಳು 30 ರಂದು ಪೂರ್ಣಗೊಳ್ಳಲಿದೆ.
ನಿಗದಿತ ಅವಧಿಯಲ್ಲಿ ಚುನಾವಣೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.



