ಡಿವಿಜಿ ಸುದ್ದಿ, ಉಡುಪಿ: ರಾಜ್ಯದಲ್ಲಿ ನಿಗದಿಯಾದ ದಿನಾಂಕದಂದೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಹೈಕೋರ್ಟ್ ಕೂಡ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದು, ಕೆಲವು ಮಾರ್ಗ ಸೂಚನೆ ನೀಡಿದೆ. ಆ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸುತ್ತೇವೆ ಎಂದರು.
ಜೂನ್ 12 ರಿಂದ 20ರವರೆಗೆ ವಿದ್ಯಾರ್ಥಿಗಳಿಗೆ ಪುನರ್ ಮನನ ಕಾರ್ಯಕ್ರಮ ನಡೆಯಲಿದೆ. ಪರೀಕ್ಷೆಗೆ ಮಕ್ಕಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಕೂಡ ಮಾಡಲಾಗಿದೆ. ಈ ಬಗ್ಗೆ ಸಾರಿಗೆ ಸಚಿವರ ಜತೆ ಚರ್ಚಿಸಲಾಗಿದೆ. ರಾಜ್ಯದಲ್ಲಿ ತರಾತುರಿಯಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದರು.



