ಚೆನ್ನೈ : ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ.
ಜೂನ್ 15ರಿಂದ ಪ್ರಾರಂಭವಾಗಬೇಕಿದ್ದ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ 11ನೇ ತರಗತಿಗೆ ರದ್ದುಪಡಿಸಲಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು, ಅವರಿಗೆ ಬಡ್ತಿ ನೀಡಲಾಗುವುದು ಎಂದಿದ್ದಾರೆ .
ಈ ಸಂಬಂಧ ಪೋಷಕರು ಪರೀಕ್ಷೆ ನಡೆಸದಂತೆ ಮನವಿ ಮಾಡಿದ್ದರು. ಸಾಂಕ್ರಾಮಿಕ ರೋಗ ತಜ್ಞರ ಅಭಿಪ್ರಾಯ ಪಡೆದು, ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈ ನಿರ್ಧಾರ ತಗೆದುಕೊಳ್ಳಲಾಗಿದೆ.
ಈಗಾಗಲೇ ತೆಲಂಗಾಣ ರಾಜ್ಯದಲ್ಲೂ 10ನೇ ತರಗತಿಯ ಪರೀಕ್ಷೆ ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿ ಉತ್ತೀರ್ಣಗೊಳಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ.